ಬ್ರಹ್ಮ ಕಲಶಾಭಿಷೇಕದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಮಧ್ಯಾಹ್ನ ಬೇಟಿ ನೀಡಿದರು.
ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವಾ ಭಟ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾರ್ಮಕ್ಕಿ ವಿಶ್ವನಾಥ ನಾಯಕ್ ಮತ್ತು ಪ್ರಮುಖರು ದೇವರ ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮತ್ತು ಕಾಷ್ಠ ಮತ್ತು ಶಿಲಾ ಕೆಲಸದ ಬಗ್ಗೆ ಸಂಸದರು ಮೆಚ್ಚುಗೆ ವ್ಯಕ್ತಪಡಿಸಿದರು.


























