ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬ ಗ್ರಾಮದ ಕುಂಬ್ರಪದವು ನಿವಾಸಿ ಸೋಮನಾಥ ಅಲಿಯಾಸ್ ಸೋಮು ಎಂಬಾತನನ್ನು ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.30 ರಂದು ಆದೇಶ ಹೊರಡಿಸಿದ್ದಾರೆ.
ಈತನ ವಿರುದ್ಧ 11 ಪ್ರಕರಣ ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.




























