Sunday, May 10, 2026
Google search engine
Homeಕಾರ್ಕಳರಾಜ್ಯ ರಾಜಕಾರಣದ ಹಿರಿಯ ನಾಯಕ, ಸಚಿವ ಡಿ. ಸುಧಾಕರ್ ನಿಧನ

ರಾಜ್ಯ ರಾಜಕಾರಣದ ಹಿರಿಯ ನಾಯಕ, ಸಚಿವ ಡಿ. ಸುಧಾಕರ್ ನಿಧನ

ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.

ಕಳೆದ ಒಂದು ತಿಂಗಳಿಂದ ಅನಾರೋಗ್ಯ
ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ವೈಯಕ್ತಿಕ ಜೀವನದಲ್ಲಿ ಸರಳ ವ್ಯಕ್ತಿತ್ವದ ಇವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಸಚಿವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments