Thursday, May 14, 2026
Google search engine
Homeಕಾರ್ಕಳಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ

ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.

ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್ ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ.

ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments