ಆನ್‌ಲೈನ್ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಕಾರ್ಕಳದ ವ್ಯಕ್ತಿಯೊಬ್ಬರಿಗೆ ಎರಡು ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಕಾರ್ಕಳದ ಗಣೇಶ್ ಎಂಬವವರನ್ನು ಜ.23 ರಂದು ಸಂಪರ್ಕಿಸಿದ ಅಪರಿಚಿತ ವ್ಯಕ್ತಿಯೊಬ್ಬ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವಂತೆ ನಂಬಿಸಿದ್ದಾನೆ.
ಇದನ್ನು ಸತ್ಯವೆಂದು ನಂಬಿದ ಗಣೇಶ್ ವಿವಿಧ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಯಿಂದ ಒಟ್ಟು 2,00,000 ರೂ. ಹಣವನ್ನು ವರ್ಗಾಯಿಸಿದ್ದರು. ಆ ಬಳಿಕ ಆರೋಪಿಯು ಲಾಭಾಂಶ ನೀಡದೆ, ಅಸಲು ಹಣವನ್ನೂ ವಾಪಸ್ ಮಾಡದೆ ಆನ್‌ಲೈನ್ ಮೂಲಕ ವಂಚಿಸಿದ್ದಾನೆ.
ಈ ಕುರಿತು ಸಂತ್ರಸ್ತರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















