Thursday, May 21, 2026
Google search engine
Homeಕಾರ್ಕಳಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರಿಯ ಸೇವಾ ಯೋಜನೆ , ರೆಡ್ ಕ್ರಾಸ್ ಘಟಕ ಮತ್ತು ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇದರ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮದಲ್ಲಿ ಡಾ| ಅಪರ್ಣಾ ಜೈನ್, ಸಹಾಯಕ ಪ್ರಾಧ್ಯಾಪಕಿ ಪ್ರಸೂತಿ ತಂತ್ರಜ್ಞೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿನಿಯರಿಗೆ ಆರೋಗ್ಯದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ. ಜಿ ಯವರು ವಹಿಸಿದ್ದರು. ವೇದಿಕೆಯಲ್ಲಿ ಸಂಶೋಧನಾ ಪ್ರಾಧ್ಯಾಪಕರಾದ ಡಾ| ಅನ್‌ಲಾ ಶೆಟ್ಟಿ, ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಕು.ಸೋನಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್ ಯೋಜನಾಧಿಕಾರಿ ಕು. ವಿಜೇತ ಇವರು ಸ್ವಾಗತಿಸಿದರು. ಕು. ಐಮನ್ ಹಾಜೀರಾ, ತೃತೀಯ ಬಿ.ಎ ವಂದಿಸಿದರು. ಕು. ಮುನೀರ, ಪ್ರಥಮ ಬಿ.ಕಾಂ ಕಾರ್ಯಕ್ರಮ ನಿರೂಪಿಸಿದರು.

 

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments