ಕಾರ್ಕಳ ತಾಲೂಕು ಮುಲ್ಲಡ್ಕ ಮುಂಡ್ಕೂರು ಗ್ರಾಮದ ನಾನಿಲ್ತಾರು ಕುಲಾಲ ಸಂಘದ ವಠಾರದಲ್ಲಿ ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದ ವತಿಯಿಂದ ದಿನಾಂಕ 23.05.2026 ರಂದು ಸಂಘ ಸ್ಥಾಪಕ ಅಧ್ಯಕ್ಷ ದಿ. ಸುಂದರ ಮೂಲ್ಯ ಅವರ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದೆ ಎಂದು ಅಭಿಮಾನಿ ಬಳಗದ ಸಂಚಾಲಕರಾದ ಸುಕುಮಾರ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಸಂಜೆ 4 ಗಂಟೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮತ್ತು ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ಹಾಗೂ ಸಂಜೆ 6.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಸಭೆಯಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ರಾಮ್ ದಾಸ್ ಭಟ್, ಮುನಿಯಾಲು ಉದಯಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಅನೇಕ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.
ಸಂಸ್ಮರಣಾ ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಸಭೆಯ ಬಳಿಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಳಗದ ಚಾಪರ್ಕ ಕಲಾವಿದರಿಂದ “ಎನ್ನನೇ ಕಥೆ” ತುಳು ನಾಟಕ ಪ್ರದರ್ಶನಗೊಳ್ಳಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































