ನಟಿ, ನಿರೂಪಕಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.
ಬಿಗ್‌ಬಾಸ್ ಬಳಿಕ ಸಮಾಜ ಸೇವೆಯಲ್ಲಿ ತೊಡಗಿದ್ದ ಅವರು, ಈಗ ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಕಿರುತೆರೆ, ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಇವರಿಗೆ ಸದ್ಯ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ ಎಂದು ಎಚ್‌ಡಿಕೆ ತಿಳಿಸಿದ್ದಾರೆ.
ಬಿಗ್ ಬಾಸ್‌ನಿಂದ ಹೊರಬಂದ ನಂತರ ಬಡವರಿಗೆ ಸಹಾಯ ಮಾಡುವಂತಹ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸದ್ಯಕ್ಕೆ ಯಾವುದೇ ಪದಾಧಿಕಾರಿ ಹುದ್ದೆ, ಸಂಘಟನಾ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಪಕ್ಷದ ಮೂಲಕಗಳು ತಿಳಿಸಿವೆ.
“ಬಿಗ್‌ಬಾಸ್‌ನಲ್ಲಿ ಭಾಗಹಿಸಿರುವಂತಹವರು, ಕನ್ನಡ ಸಿನಿಮಾದಲ್ಲಿ ನಟಿಸಿದ, ಟಿವಿ ಮಾಧ್ಯಮದ ನಿರೂಪಕಿ ಜಾಹ್ನವಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಕ್ಷಕ್ಕೆ ಒಂದು ಉತ್ತರ ಹೆಸರು ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಅವರನ್ನು ನಗರ ಘಟಕದ ಅಧ್ಯಕ್ಷರು ಸ್ವಾಗತಿಸುತ್ತಿದ್ದಾರೆ ” ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬಳಿಕ ಜಾಹ್ನವಿ ಕಾಲಿಗೆ ಬಿದ್ದು ಸಚಿವರ ಆಶೀರ್ವಾದ ಪಡೆದುಕೊಂಡರು.


























