ಅ.2:ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ 25ನೇ ವರ್ಷಕ್ಕೆ ಪಾದಾರ್ಪಣೆ ರಜತ ವರ್ಷಾಚರಣೆಗೆ ಚಾಲನೆ, ರಜತ ವರ್ಷದ ಲಾಂಛನ ಬಿಡುಗಡೆ & ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

0
ಅಕ್ಟೋಬರ್ 2ರಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ 25ನೇ ವರ್ಷಕ್ಕೆ ಪಾದಾರ್ಪಣೆ                                   ರಜತ ವರ್ಷಾಚರಣೆಗೆ ಚಾಲನೆ, ರಜತ ವರ್ಷದ ಲಾಂಛನ ಬಿಡುಗಡೆ & ವಿವಿಧ ಕಾರ್ಯಕ್ರಮಗಳಿಗೆ ಚಾಲನೆ
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು ಅಕ್ಟೋಬರ್ 2ರಂದು 25ನೇ ವರ್ಷಕ್ಕೆ ಪಾದಾರ್ಪಣೆಗೊಳ್ಳಲಿದೆ ಆದಿನ ಮಧ್ಯಾಹ್ನ ಗಂಟೆ ೦೨ಕ್ಕೆ ಸರಿಯಾಗಿ ರಜತ ವರ್ಷಾಚರಣೆಗೆ ಚಾಲನೆ ಕಾರ್ಯಕ್ರಮ ನಡೆಯಲಿದೆ.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರು ಮತ್ತು ಯಕ್ಷರಂಗದ ಚಾರ್ಲಿ ಚಾಪ್ಲಿನ್ ಖ್ಯಾತಿಯ ಸೀತಾರಾಮ್ ಕುಮಾರ್ ಕಟೀಲು ಅವರು ರಜತ ವರ್ಷಾಚರಣೆಗೆ ಚಾಲನೆ ನೀಡಲಿದ್ದಾರೆ.
ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅವರು ರಜತ ವರ್ಷದ ಲಾಂಛನ ಬಿಡುಗಡೆ ಮಾಡಲಿದ್ದಾರೆ. ಭಾರತೀಯ ಜೇಸಿಐನ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ. ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಂಗಳೂರು ಕೇಂದ್ರ ಸಮಿತಿ ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ಎರ್ಲಪಾಡಿ ಶ್ರೀನಿವಾಸ ಪೂಜಾರಿ ಅವರು ಸಂಘದ ಹಾಡು ಬಿಡುಗಡೆ ಮಾಡಲಿದ್ದಾರೆ.
ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ಜಯಂತಿ ಆರ್. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಪ್ರಥ್ವಿರಾಜ್ ಬಲ್ಲಾಳ್ ಅವರಿಗೆ ಸನ್ಮಾನ ಸ್ವೀಕರಿಸಲಿದ್ದಾರೆ. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಕಾರ್ಯಕ್ರಮದ ವಿಶೇಷತೆ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹೂದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ 25ನೇ ವರ್ಷದ ಸ್ಥಾಪನಾ ದಿನಾಚರಣೆ, ರಜತ ವರ್ಷಾಚರಣೆಗೆ ಚಾಲನೆ, ರಜತ ವರ್ಷದ ಲಾಂಛನ ಬಿಡುಗಡೆ, ಸೇವಾ ಸಂಸ್ಥೆಗಳಿಗೆ ಗೌರವಾರ್ಪಣೆ, ಭಜನಾ ಮಂಡಳಿಗಳಿಗೆ ಸನ್ಮಾನ, ಸಹಾಯಧನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ, ಪೂರ್ವಾಧ್ಯಕ್ಷರುಗಳ ಸನ್ಮಾನ, ಸಂಘದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.
   

LEAVE A REPLY

Please enter your comment!
Please enter your name here