Friday, May 29, 2026
Google search engine
Homeಕಾರ್ಕಳಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜು ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜು ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ದಿನಾಂಕ 28.05.2026ರಂದು ನಡೆಯಿತು. ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಉತ್ತಮ ಸ್ನೇಹಿತರ ಪಾತ್ರ ಮಹತ್ವವಾದುದು, ಜ್ಞಾನಸುಧಾ ಕೊಡಮಾಡುವ ಮೌಲ್ಯಯುತ ಶಿಕ್ಷಣದ ಸದ್ಬಳಕೆ ಮಾಡಿ ವಿದ್ಯಾರ್ಥಿಗಳು ಪೋಷಕರಿಗೆ ಶೈಕ್ಷಣಿಕ ಸಾಧನೆಯ ಉಡುಗೊರೆ ಕೊಡಿ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ಮಾತನಾಡಿ ಎರಡು ವರ್ಷಗಳ ಶೈಕ್ಷಣಿಕ ಚಟುವಟಿಕೆಗಳು ಸಾಗುವ ಬಗೆಯನ್ನು ವಿವರಿಸಿದರು. ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಕೋಆರ್ಡಿನೇಟರ್ ಆಗಿರುವ ಸಂದೀಪ್ ಇವರು ಮಾತನಾಡಿ ವಿವಿಧ ಪ್ರವೇಶ ಪರೀಕ್ಷೆಗಳ ತರಬೇತಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಮಣಿಪಾಲ ಜ್ಞಾನಸುಧಾ ಕಾಲೇಜಿಗೆ ದಾಖಲಾತಿ ಹೊಂದಿದ ಅರ್ಹ 73 ವಿದ್ಯಾರ್ಥಿಗಳಿಗೆ 29.88 ಲಕ್ಷ ವಿದ್ಯಾರ್ಥಿವೇತನ ನೀಡಲಾಯಿತು.
ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಉಪಪ್ರಾಂಶುಪಾಲರುಗಳಾದ ರವಿ ಜಿ, ಹೇಮಂತ್ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments