ಕಾರ್ಕಳದ ಕೆರ್ವಾಶೆ ಗರಡಿ ಬಳಿ ಎರಡು ಬೈಕುಗಳ ನಡುವೆ ಅಪಘಾತ ಸಂಭವಿಸಿ, ಓರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ನಾಗೇಶ್ ಬಾಳಿಗ ಎಂದು ಗುರ್ತಿಸಲಾಗಿದೆ. ಗಾಯಾಳುವು ಬೈಕಿನಲ್ಲಿ ಸವಾರಿ ಮಾಡುತ್ತಿದ್ದ ವೇಳೆ, ಕೆರ್ವಾಶೆ ಬಳಿ ವಿರುದ್ಧ ದಿಕ್ಕಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ರಸ್ತೆಗೆ ಬಿದ್ದ ನಾಗೇಶ ಅವರಿಗೆ ತಲೆಗೆ ಪೆಟ್ಟು ಬಿದ್ದಿದ್ದು, ತಕ್ಷಣ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಈ ಬಗ್ಗೆ ಎಸ್. ವೆಂಕಟೇಶ ಪ್ರಭು ಎಂಬವರು ನೀಡಿದ ದೂರಿನ ಅನ್ವಯ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

















