Tuesday, June 2, 2026
Google search engine
Homeರಾಜ್ಯಬಿಜೆಪಿಗೆ ಗುಡ್‌ಬೈ ಹೇಳಿದ ಕೆ. ಅಣ್ಣಾಮಲೈ

ಬಿಜೆಪಿಗೆ ಗುಡ್‌ಬೈ ಹೇಳಿದ ಕೆ. ಅಣ್ಣಾಮಲೈ

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಅಣ್ಣಾಮಲೈ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments