Tuesday, June 2, 2026
Google search engine
Homeಕಾರ್ಕಳಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ: ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನೇರ ಪ್ರಸಾರ ಆಯೋಜನೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ: ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನೇರ ಪ್ರಸಾರ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿಗಳಾಗಿ ಜವಾಬ್ದಾರಿ ನಿರ್ವಹಿಸಿ ಈಗ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ದಿನಾಂಕ 03.06.2026 ರ ಬುಧವಾರದಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮದ್ಯಾಹ್ನ 3.30 ರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಪ್ರಮಾಣವಚನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.

ಪ್ರಮಾಣವಚನದ ನೇರ ಪ್ರಸಾರ ಮತ್ತು ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಬ್ಲಾಕ್ ಅಧ್ಯಕ್ಷರುಗಳಾದ ಶುಭದ ರಾವ್, ಗೋಪಿನಾಥ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments