ಕುಕ್ಕೆಸುಬ್ರಮಣ್ಯಕ್ಕೆ ಹೊರಟ್ಟಿದ್ದ ಕಾರ್ಕಳದ ನಕ್ರೆಯ ಒಂದೇ ಕುಟುಂಬದ ಐವರು ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

















