Thursday, June 4, 2026
Google search engine
Homeಕಾರ್ಕಳನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು – ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು – ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ನಂತರ 2022ರ ಜನವರಿ 5 ರಂದು ಶುಭಾ ಪೂಂಜಾ ಅವರ ಸ್ವಂತ ಊರಿನಲ್ಲಿ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈಗ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ.

ನಾಲ್ಕು ವರ್ಷಗಳ ಸುಂದರ ಸಂಸಾರದಲ್ಲಿ ಹಠಾತ್ತನೆ ಇಂತಹ ಬಿರುಕು ಮೂಡಲು ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಹೊರಬಂದಿಲ್ಲ. ಈ ಕುರಿತು ಮಾಧ್ಯಮಗಳು ಸಂಪರ್ಕಿಸಿದಾಗ, ವಿಚ್ಛೇದನಕ್ಕೆ ಕಾರಣವನ್ನು ಬಹಿರಂಗಪಡಿಸಲು ಸುಮಂತ್ ಬಿಲ್ಲವ ನಿರಾಕರಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ನಿರ್ಧಾರವನ್ನು ಗೌರವಿಸಬೇಕಾಗಿ ಅವರು ಕೋರಿದ್ದಾರೆ.

ಮೊಗ್ಗಿನ ಮನಸ್ಸು, ಚಂಡ ಸೇರಿದಂತೆ ಹಲವು ಯಶಸ್ವಿ ಕನ್ನಡ ಸಿನಿಮಾಗಳಲ್ಲಿ ನಟಿಸಿ, ಬಿಗ್ ಬಾಸ್ ಸೀಸನ್ 8 ರಲ್ಲೂ ಸಖತ್ ಮನರಂಜನೆ ನೀಡಿದ್ದ ಶುಭಾ ಪೂಂಜಾ ಅವರ ಈ ಹಠಾತ್ ನಿರ್ಧಾರ ಸ್ಯಾಂಡಲ್‌ವುಡ್ ವಲಯದಲ್ಲಿ ಮತ್ತು ಅವರ ಅಭಿಮಾನಿಗಳಲ್ಲಿ ತೀವ್ರ ಆಶ್ಚರ್ಯ ಮೂಡಿಸಿದೆ.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments