ರೋಟರಿ ಕ್ಲಬ್ ಕಾರ್ಕಳ ವತಿಯಿಂದ ವಿದ್ಯಾರ್ಥಿಗೆ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾರಾಡಿ ಇಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ ರೋಟರಿಯ ಧ್ಯೇಯ ವಾಕ್ಯ ಸ್ವಹಿತ ಮೀರಿದ ಸೇವೆ, ಸಮುದಾಯ ಸೇವೆಯಲ್ಲಿ ಸದಾ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಚೆನ್ನಾಗಿ ಕಲಿತು ಮುಂದೊಂದು ದಿನ ನೀವು ಇನ್ನೊಬ್ಬರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ ಎಂದರು.
ಕಾರ್ಯಕ್ರಮದ ಪ್ರಾಯೋಜಕರಾದ ಸಮದ್ ಖಾನ್ ಮಾತನಾಡುತ್ತಾ ಬಡತನ ಕಷ್ಟಗಳು ಅನೇಕ ಪಾಠಗಳನ್ನು ಕಲಿಸಿಕೊಡುತ್ತದೆ. ಅದೇ ಇಂದು ಇತರರಿಗೆ ಸಹಾಯ ಮಾಡಲು ನನಗೆ ಪ್ರೇರಣೆಯಾಗಿದೆ ಎಂದರು.
ಕ್ಲಬ್ಬಿನ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ ಮಾತನಾಡಿ ಇಂದು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಾಯ ಮಾಡುವ ದಾನಿಗಳು ಸಾಕಷ್ಟು ಇದ್ದಾರೆ, ಇದೆಲ್ಲವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಕಲಿತು ದೇಶದ ಸತ್ಪ್ರಜೆಗಳಾಗಿ ಎಂದರು.
ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷೆ ಅನಿತಾ ಉಪಸ್ಥಿತರಿದ್ದು ಶುಭ ಹಾರೈಸಿದರು. ಮುಖ್ಯ ಶಿಕ್ಷಕ ದಾಮೋದರ ದೇವಾಡಿಗ ಸ್ವಾಗತಿಸಿದರು. ಸಹ ಶಿಕ್ಷಕ ನವೀನ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


















