Sunday, June 7, 2026
Google search engine
Homeಕಾರ್ಕಳಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ ಮತ್ತು ಸನ್ಮಾನ

ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ ಮತ್ತು ಸನ್ಮಾನ

ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇಲ್ಲಿ 2026 – 27ನೇ ಶೈಕ್ಷಣಿಕ ವರ್ಷದ ಪೋಷಕರ ಮಹಾಸಭೆಯು ನಡೆಯಿತು. ಇದೇ ಸಭೆಯಲ್ಲಿ ಕಳೆದ ಮಾರ್ಚಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರಾದ ನಾರ್ಬರ್ಟ್ ಮಾರ್ಟಿಸ್ ಇವರು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಹಿರಿಯ ಉಪನ್ಯಾಸಕರಾದ ಗೋಪಾಲಕೃಷ್ಣ ಗೋರೆ, ಇವರು ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕ ಭಾಷಣವನ್ನು ಮಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ರತ್ನಾಕರ ಪೂಜಾರಿ ಇವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸಂತೋಷ ವಾಗ್ಲೆ, ಎಸ್ ಡಿ ಎಂ ಸಿ ಅಧ್ಯಕ್ಷ ಸ್ಟೀವನ್ ಡಿಸೋಜ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುತ್ತುಮನೆ ಪ್ರಶಾಂತ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಸೀತಾರಾಮ ಭಟ್ ಇವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಇತಿಹಾಸ ಉಪನ್ಯಾಸಕರಾದ ಸುಜಾತ ನಾಯಕ್ ನಿರೂಪಿಸಿದರು. ಗಣಿತಶಾಸ್ತ್ರ ಉಪನ್ಯಾಸಕ ಗಾಡ್ ಫ್ರೆಡ್ ಕರ್ಕಡ ಇವರು ಧನ್ಯವಾದ ಸಮರ್ಪಣೆ ಮಾಡಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments