ಕರಾವಳಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅವರು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಂದ ಗೌರವ ಸ್ವೀಕರಿಸಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು ನೀಡಬೇಕು ಎಂಬ ಮನವಿಯನ್ನು ಆಲಿಸಿ ಮಾತನಾಡಿದರು.
ಕರ್ನಾಟಕದ ಕರಾವಳಿ ಪ್ರದೇಶವು ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಮೀನು ಗಾರಿಕೆ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಈ ಭಾಗದ ಅಭಿವೃದ್ಧಿಗೆ ವಿಶೇಷ ಯೋಜನೆ ಗಳನ್ನು ರೂಪಿಸಬೇಕಾಗಿದೆ.
ಕರಾವಳಿಯ ಪ್ರಮುಖ ರಸ್ತೆಗಳ ಅಭಿವೃದ್ಧಿ, ಬಂದರುಗಳ ಆಧುನೀಕರಣ, ಮೀನುಗಾರರಿಗೆ ಮೂಲಸೌಕರ್ಯಗಳ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಉದಯ್ ಶೆಟ್ಟಿ ಮನವಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ’ ಅಭಿನಂದನೆ ಸಲ್ಲಿಸಿ ಕರಾವಳಿಯಲ್ಲಿ ಪಕ್ಷ ಸಂಘಟನೆಗೆ ವಿಶೇಷ ಗಮನ ಹರಿಸುವಂತೆ ಮನವಿ ಮಾಡಿದರು.


















