ರಾಜ್ಯ ಅತ್ಯುತ್ತಮ ಯುವಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಬಳಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಂಘದ ಸಂಚಾಲಕರಾದ ಸಂದೀಪ್ ವಿ. ಪೂಜಾರಿ ಅಬ್ಬನಡ್ಕ, ಗೌರವ ಸದಸ್ಯರಾದ ಸದಾಶಿವ ಪುತ್ರನ್, ಪೂರ್ವ ಅಧ್ಯಕ್ಷರಾದ ಸುರೇಶ್ ಕಾಸರಬೈಲು, ಕಾರ್ಯದರ್ಶಿ ಸತೀಶ್, ಮಹಿಳಾ ಸಂಘಟನಾ ಕಾರ್ಯದರ್ಶಿ, ಸುಲೋಚನ ಕೋಟ್ಯಾನ್, ಭಜನಾ ಮಂಡಳಿಯ ಅಧ್ಯಕ್ಷ ಕೀರ್ತನ್ ಪೂಜಾರಿ, ಉಪಾಧ್ಯಕ್ಷೆ ಅಶ್ವಿನಿ ಬೋಳ, ಕಾರ್ಯದರ್ಶಿ ಶ್ರದ್ಧಾ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ ಪದ್ಮಶ್ರೀ ಪೂಜಾರಿ ಅನ್ನಪೂರ್ಣ ಕಾಮತ್, ಶ್ರೀಕಾಂತ್ ಆಚಾರ್ಯ ಯೋಗೀಶ್ ಆಚಾರ್ಯ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


















