Saturday, June 13, 2026
Google search engine
Homeಕಾರ್ಕಳಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್...

ಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ ಆಯ್ಕೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯನ್ನು ಜೂ. ೭ ರಂದು ಶಾಲೆಯಲ್ಲಿ ಕರೆಯಲಾಗಿದ್ದು ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ವಸಂತಿ ಹೆಚ್. ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments