ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಭರ್ಜರಿಯಾಗಿ ಕುಸಿತ ಕಂಡಿವೆ. ಚಿನ್ನದ ಬೆಲೆ ಒಂದು ಗ್ರಾಮ್ಗೆ ಬರೋಬ್ಬರಿ 395 ರೂನಿಂದ 450 ರೂಗಳವರೆಗೆ ಇಳಿಕೆಯಾಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದರೆ, ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿವೆ.
ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಬಂಗಾರದ ದರ ತಗ್ಗಿದೆ. ಹಳದಿ ಲೋಹದಂತೆ ಬಿಳಿ ಲೋಹವಾದ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್ಗೆ ಬರೋಬ್ಬರಿ 10 ರೂ ತಗ್ಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,48,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.
ಬೆಂಗಳೂರಿನಲ್ಲಿ 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,886 ರೂ 22ಕ್ಯಾರಟ್ನ
1 ಗ್ರಾಂ ಚಿನ್ನದ ಬೆಲೆ: 13,645 ರೂ ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ ಆಗಿದೆ.


















