Saturday, June 13, 2026
Google search engine
Homeಕಾರ್ಕಳಗ್ರಾಹಕರ ಜೇಬಿಗೆ ಮತ್ತಷ್ಟು ಆರ್ಥಿಕ ಹೊರೆ: ಗ್ಯಾಸ್ ಬೆನ್ನಲ್ಲೇ ಗಗನಕ್ಕೇರಿದ ಅಕ್ಕಿ ದರ, ಕೆಜಿಗೆ 10...

ಗ್ರಾಹಕರ ಜೇಬಿಗೆ ಮತ್ತಷ್ಟು ಆರ್ಥಿಕ ಹೊರೆ: ಗ್ಯಾಸ್ ಬೆನ್ನಲ್ಲೇ ಗಗನಕ್ಕೇರಿದ ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆಯ ತರಕಾರಿ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಭಾರಿ ಆಘಾತ ಎದುರಾಗಿದೆ. ನಿತ್ಯದ ಊಟಕ್ಕೆ ಅತಿ ಅತ್ಯಗತ್ಯವಾಗಿರುವ ಅಕ್ಕಿಯ ಬೆಲೆಯಲ್ಲಿ ದಿಢೀರ್ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ತಳಿಯ ಅಕ್ಕಿಗಳ ದರವು ಪ್ರತಿ ಕೆಜಿಗೆ 10 ರೂಪಾಯಿಯಿಂದ 20 ರೂಪಾಯಿಯವರೆಗೆ ದುಬಾರಿಯಾಗಿದ್ದು, ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳ ಬಜೆಟ್ ಸಂಪೂರ್ಣ ಏರುಪೇರಾಗುವಂತೆ ಮಾಡಿದೆ.

ಮಾರುಕಟ್ಟೆಯ ವರ್ತಕರ ಪ್ರಕಾರ, ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯ ಪ್ರಮಾಣದಲ್ಲಿ ಭಾರಿ ಕೊರತೆ ಉಂಟಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರವು ಅಕ್ಕಿ ರಫ್ತಿಗೆ ಮುಕ್ತ ಅವಕಾಶ ನೀಡಿರುವುದರಿಂದ, ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ತಳಿಯ ಅಕ್ಕಿಯ ಲಭ್ಯತೆ ಗಣನೀಯವಾಗಿ ಕ್ಷೀಣಿಸಿದೆ. ಇದು ನೇರವಾಗಿ ಮುಕ್ತ ಮಾರುಕಟ್ಟೆಯ ದರಗಳ ಮೇಲೆ ಪ್ರಭಾವ ಬೀರಿದೆ. ಸದ್ಯ ಅಕ್ಕಿ ದರ ಹೆಚ್ಚಾಗಿರುವುದರಿಂದ ಗ್ರಾಹಕರು ಖರೀದಿಯ ಪ್ರಮಾಣವನ್ನು ಕಡಿಮೆಗೊಳಿಸಿದ್ದು, ವ್ಯಾಪಾರಿಗಳ ಮಾರಾಟದಲ್ಲೂ ಭಾರಿ ಕುಸಿತ ಕಂಡುಬಂದಿದೆ ಎಂದು ವರ್ತಕರಾದ ಅರುಣ್ ಪರಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ನವೆಂಬರ್ ವರೆಗೂ ಬೆಲೆ ಇಳಿಕೆ ಅಸಾಧ್ಯ ರೈತರು ಬೆಳೆದಿರುವ ಹೊಸ ಭತ್ತದ ಬೆಳೆ ಕಟಾವಾಗಿ, ಹೊಸ ಅಕ್ಕಿ ಮಾರುಕಟ್ಟೆಗೆ ಬರಲು ಇನ್ನು ಕನಿಷ್ಠ ನವೆಂಬರ್ ತಿಂಗಳವರೆಗೆ ಕಾಯಬೇಕಾಗಿದೆ. ಅಲ್ಲಿಯವರೆಗೂ ಮಾರುಕಟ್ಟೆಯಲ್ಲಿ ಅಕ್ಕಿಯ ಪೂರೈಕೆ ಕೊರತೆ ಹೀಗೆಯೇ ಮುಂದುವರಿಯಲಿದ್ದು, ಸದ್ಯಕ್ಕಂತೂ ಬೆಲೆ ಇಳಿಕೆಯಾಗುವ ಯಾವುದೇ ಲಕ್ಷಣಗಳಿಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆ ಮತ್ತು ಪೂರೈಕೆಯ ನಡುವಿನ ವ್ಯತ್ಯಾಸ ಹೀಗೆಯೇ ಮುಂದುವರಿದರೆ, ಮುಂಬರುವ ದಿನಗಳಲ್ಲಿ ಕೆಲವು ಪ್ರೀಮಿಯಂ ತಳಿಯ ಅಕ್ಕಿ ದರಗಳು ಕೆಜಿಗೆ 100 ರೂಪಾಯಿಯ ಗಡಿ ದಾಟಿದರೂ ಆಶ್ಚರ್ಯವಿಲ್ಲ ಎಂದು ಅಕ್ಕಿ ವ್ಯಾಪಾರಿ ಸುರೇಶ್ ತಿಳಿಸಿದ್ದಾರೆ.

 

 

 

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments