Monday, June 15, 2026
Google search engine
Homeಕಾರ್ಕಳ'ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ'- ರಾಜ್ಯ ಸರ್ಕಾರಗಳಿಗೆ ನಿರ್ಮಲಾ ಸೀತಾರಾಮನ್ ಎಚ್ಚರಿಕೆ

‘ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ’- ರಾಜ್ಯ ಸರ್ಕಾರಗಳಿಗೆ ನಿರ್ಮಲಾ ಸೀತಾರಾಮನ್ ಎಚ್ಚರಿಕೆ

ದೇವನಹಳ್ಳಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, “ರಾಜ್ಯ ಸರ್ಕಾರಗಳು ಗ್ಯಾರಂಟಿ ಯೋಜನೆಗಳನ್ನ ಕೊಡುತ್ತಿವೆ. ನಿಮ್ಮಿಂದ ಕೊಡಲು ಆಗದಿದ್ದರೆ ಸದನದಲ್ಲಿ ಚರ್ಚೆ ಮಾಡಿ, ಬಜೆಟ್‌ನಲ್ಲಿ ನಿಧಿ ಸಂಗ್ರಹದ ಬಗ್ಗೆ ಪ್ಲಾನ್ ಮಾಡಿ. ಅದನ್ನು ಬಿಟ್ಟು ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ” ಎಂದು ಹೇಳಿದ್ದಾರೆ.

ಅನುದಾನದ ವಿಚಾರದಲ್ಲಿ ತಾರತಮ್ಯ ವಿಚಾರವಾಗಿ ಮಾತನಾಡಿದ ಅವರು, “ಹೆಚ್ಚು ತೆರಿಗೆ ಪಾಲು ಕೊಡ್ತಾ ಇದೀವಿ ಅಂದ ಮಾತ್ರಕ್ಕೆ ಹೆಚ್ಚು ಅನುದಾನ ಕೊಟ್ಟಿಲ್ಲ ಅನ್ನೋದು ಸರಿಯಲ್ಲ. ಕಲಬುರಗಿ, ಯಾದಗಿರಿ ಅಂತಹ ಪ್ರದೇಶಗಳಿಂದಲೂ ತೆರಿಗೆ ಸಂಗ್ರಹ ಆಗುತ್ತದೆ. ಆದ್ರೆ ಬೆಂಗಳೂರಿಗೆ ಅನುದಾನ ಹೆಚ್ಚು ಕೊಡೋದು ಏಕೆ” ಎಂದು ಪ್ರಶ್ನಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments