Monday, June 15, 2026
Google search engine
Homeಕಾರ್ಕಳಹಿಂದಿ ಕಿರುತೆರೆ ನಟಿ ಸಂಚಿತಾ ಉಗಾಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಿಂದಿ ಕಿರುತೆರೆ ನಟಿ ಸಂಚಿತಾ ಉಗಾಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದ ಯುವ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ನಾಲಾಸೋಪಾರಾದಲ್ಲಿ ಜೂನ್ 14 ರಂದು ನಡೆದಿದೆ.

ಹಿಂದಿಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 22 ವರ್ಷ ವಯಸ್ಸಾಗಿತ್ತು. ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿ ಅವರು ತಮ್ಮ ಜೀವ ಕೊನೆ ಮಾಡಿಕೊಂಡಿದ್ದು, ಬೆಡ್‌ರೂಮ್‌ನಲ್ಲಿ ಅವರ ಶವ ಸಿಕ್ಕಿದೆ. ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ.

ಅವರು ಕೊಠಡಿಗೆ ಬೀಗ ಹಾಕಿಕೊಂಡು ಸೀರೆಯ ಸಹಾಯದಿಂದ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುಟುಂಬ ಸದಸ್ಯರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಮೃತರಾಗಿರುವುದಾಗಿ ಘೋಷಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಿದ್ದಾರೆ. ಸದ್ಯಕ್ಕೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಸಂಚಿತಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಗಂಟೆಗಳ ಮುನ್ನವಷ್ಟೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ನಲ್ಲಿ ರೀಲ್ಸ್ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಅತ್ಯಂತ ಖುಷಿಯಾಗಿ ನಗುತ್ತಾ ಕಾಣಿಸಿಕೊಂಡಿದ್ದ ನಟಿ, ಇದ್ದಕ್ಕಿದ್ದಂತೆ ಇಂತಹ ನಿರ್ಧಾರ ಕೈಗೊಂಡಿರುವುದನ್ನು ಕಂಡು ಅಭಿಮಾನಿಗಳು ಮತ್ತು ಆಕೆಯ ಸಹ-ಕಲಾವಿದರು ತೀವ್ರ ಆಶ್ಚರ್ಯ ಪಡುವಂತಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments