Tuesday, June 16, 2026
Google search engine
Homeಕಾರ್ಕಳಮಣಿಪಾಲ ಜ್ಞಾನಸುಧಾ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ ಜ್ಞಾನಸುಧಾ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ಉಪನಿರ್ದೇಶಕರಾದ ಶ್ರೀ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಶ್ರೀ ಗಿರೀಶ ಸಿ ಅಸಿಸ್ಟೆಂಟ್ ಡೈರೆಕ್ಟರ್ ಕಂಪ್ಯೂಟರ್ ಸೆಲ್ ಕೆಎಸ್ ಇ ಎ ಬಿ ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ವಹಿಸಿದ್ದರು.

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ರೂಪ ಎಲ್ ಭಟ್, ಆದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ಸಂಜೀವ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ ಇ ಓ ಶ್ರೀ ದಿನೇಶ್ ಎಂ ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಪ್ರಾಂಶುಪಾಲರಾದ ಶ್ರೀ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರತ್ ಕುಮಾರ್ ಸ್ವಾಗತಿಸಿ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಡಾಕ್ಟರ್ ಪ್ರಜ್ವಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments