Tuesday, June 16, 2026
Google search engine
Homeಕಾರ್ಕಳ`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು

`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು

ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ

ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ.

3 ದಿನವಾದರೂ ಮನೆಗೆ ಬಾರದ ಸಿದ್ದಾರ್ಥ, ಸೋಮವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆಯಷ್ಟೇ ಹುಮ್ನಾಬಾದ್ ಪೊಲೀಸ್ ಠಾಣೆಗೆ ಕುಟುಂಬಸ್ಥರು ಮಿಸ್ಸಿಂಗ್‌ ದೂರು ದಾಖಲಿಸಲು ಹೋಗಿದ್ದರು.

ಮೊಬೈಲ್ ಟವರ್ ಲೊಕೆಶನ್‌ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಬಳಿಕ ಶವ ಪರೀಕ್ಷೆಗಾಗಿ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಿದ್ದಾರೆ. ಸಾವಿಗೆ ನಿಖರ ಕಾರಣ‌ ಇನ್ನೂ ತಿಳಿದುಬಂದಿಲ್ಲ ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.

 

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments