Tuesday, June 16, 2026
Google search engine
Homeಕಾರ್ಕಳನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಇನ್ನಿಲ್ಲ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಇನ್ನಿಲ್ಲ

ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಧರ್ಮಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ ಅವರು ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ ಕಾರಣ, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಮೌಂಟ್ ಕಾರ್ಮೆಲ್ ಕಾಲೇಜ್ ಅಪಾರ್ಟ್‌ಮೆಂಟ್ ಬಳಿ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments