Wednesday, June 17, 2026
Google search engine
Homeಕಾರ್ಕಳಕಾರ್ಕಳ: ಅಕ್ರಮ ಮದ್ಯ ಮಾರಾಟ; ಓರ್ವನ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಅಕ್ರಮ ಮದ್ಯ ಮಾರಾಟ; ಓರ್ವನ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಜೂ. 16 ರಂದು ಕಾರ್ಕಳದ ಕಸಬಾ ಗ್ರಾಮದಲ್ಲಿ ನಡೆದಿದೆ.

ಆರೋಪಿ ಉಮೇಶ್ ಎಂಬವನು ಕಸಬಾ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ವೈನ್ ಶಾಪ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸರ್ಕಾರಿ ಅನುಮತಿ ಪಡೆಯದೇ ಮದ್ಯ ಮಾರಾಟ ಮಾಡಿರುವುದು ಕಂಡುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments