Friday, June 19, 2026
Google search engine
Homeಕಾರ್ಕಳದಲಿತ ವ್ಯಕ್ತಿಗೆ ಆರ್‌ಎಸ್‌ಎಸ್ ಬಗ್ಗೆ ಇಲ್ಲ ಸಲ್ಲದ ಕಾಳಜಿ ಏಕೆ? RSS ತಂಟೆಗೆ ಬಂದವರು ಉಳಿದಿಲ್ಲ:...

ದಲಿತ ವ್ಯಕ್ತಿಗೆ ಆರ್‌ಎಸ್‌ಎಸ್ ಬಗ್ಗೆ ಇಲ್ಲ ಸಲ್ಲದ ಕಾಳಜಿ ಏಕೆ? RSS ತಂಟೆಗೆ ಬಂದವರು ಉಳಿದಿಲ್ಲ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ

ದಲಿತ ವ್ಯಕ್ತಿಯೊಬ್ಬರಿಗೆ ಆರ್ ಎಸ್ ಎಸ್ ಬಗ್ಗೆ ಇಲ್ಲ ಸಲ್ಲದ ಕಾಳಜಿ ಏಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ವಿರುದ್ಧ ಹೋರಾಡಿದವರು ಬದುಕುಳಿದಿಲ್ಲ. ದಲಿತ ವ್ಯಕ್ತಿಯೊಬ್ಬರು ಆರ್‌ಎಸ್‌ಎಸ್ ಬಗ್ಗೆ ಏಕೆ ಕಾಳಜಿ ವಹಿಸಬೇಕು?” ಎಂದು ಪ್ರಶ್ನಿಸಿದ್ದಾರೆ. “ಆರ್‌ಎಸ್‌ಎಸ್ ಅನ್ನು ನೋಂದಾಯಿಸುವುದರಿಂದ ನೀವು ಏನು ಸಾಧಿಸುತ್ತೀರಿ? ಅದು ಗೃಹ ಸಚಿವರ ಕೆಲಸವಲ್ಲ” ಎಂದು ಅವರು ಹೇಳಿದರು.

ಇದೇ ವೇಳೆ ಪ್ರಿಯಾಂಕ್ ಖರ್ಗೆ ಅವರ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಿದ ಸಂಸದರು, “ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನಲ್ಲಿ ದಶಕಗಳ ಕಾಲ ದುಡಿದಿದ್ದಾರೆ ಎಂಬ ಕಾರಣಕ್ಕೆ ಇವರಿಗೆ ಗೃಹ ಖಾತೆ ನೀಡಲಾಗಿದೆ. ಇವರಿಗೆ ಸ್ವಂತ ಬುದ್ಧಿ ಇಲ್ಲ. ಸುಮ್ಮನೆ ಸಿಕ್ಕಿರುವ ಗೃಹ ಖಾತೆಯಲ್ಲಿ ಸರಿಯಾಗಿ ಕೆಲಸ ಮಾಡಿ ಹೆಸರು ಗಳಿಸಲಿ” ಎಂದು ವ್ಯಂಗ್ಯವಾಡಿದರು.

ಸಂಘಟನೆಯ ವಿರುದ್ಧದ ಹೇಳಿಕೆಗಳನ್ನು ನಿಲ್ಲಿಸಿ, ಗೃಹ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಲಿ ಎಂದು ಅವರು ಈ ಸಂದರ್ಭದಲ್ಲಿ ಸಲಹೆ ನೀಡಿದರು.

 

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments