ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ ಕೆಲ ದಿನಗಳ ಹಿಂದೆ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿತ್ತು.ಈಗ ನೀಟ್ ಪರೀಕ್ಷೆ ಅಕ್ರಮದಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ 1 ಕೋಟಿ ರೂಪಾಯಿಗಳನ್ನು ಪರಿಹಾರ ಮೊತ್ತವಾಗಿ ನೀಡಬೇಕೆಂದು ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವ ಬಹಿರಂಗ ಪತ್ರದಲ್ಲಿ ದೀಪ್ಕೆ, ಕಳೆದ 48 ಗಂಟೆಗಳಲ್ಲಿ ಇಲ್ಲಿವರೆಗೆ ಸುಮಾರು 11 ಜನ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗದೇ ಹೋಗಿದ್ದರೆ, ಈ ಮಕ್ಕಳು ಜೀವ ಕಳೆದುಕೊಳ್ಳುತ್ತಿರಲಿಲ್ಲ. ಈಗ ಇದರ ಹೊಣೆಯನ್ನು ಕೇಂದ್ರ ಸರ್ಕಾರ ಹೊತ್ತುಕೊಂಡು ಮೃತರ ಕುಟುಂಬಗಳಿಗೆ ತಲಾ 1 ಕೋಟಿ ಆರ್ಥಿಕ ಸಹಾಯ ಮಾಡಬೇಕೆಂದು ದೀಪ್ಕೆ ಒತ್ತಾಯಿಸಿದ್ದಾರೆ.
ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಿರಲೆಂದು, ಪಾಲಕರು ಲಕ್ಷಾಂತರ ರೂಪಾಯಿಗಳನ್ನು ಹೂಡಿಕೆ ಮಾಡಿದ್ದರು. ಆದರೆ ಪರೀಕ್ಷಾ ಅಕ್ರಮದಿಂದ ಅವರ ಹಣ ಮತ್ತು ಮಕ್ಕಳ ಜೀವ ಎರಡನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.



















