Sunday, June 21, 2026
Google search engine
Homeಕಾರ್ಕಳಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ​​: ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ​​: ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ

ವಿಧಾನ ಪರಿಷತ್​​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾಗಿದೆ. ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಮುಂದಿನ ವಾರದಲ್ಲಿ ಈ ಮೀಟಿಂಗ್​​ ಸಾಧ್ಯತೆ ಇದೆ. ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಚುನಾವಣೆಯಲ್ಲಿ‌ ನಮ್ಮಿಂದ 4 ಅಡ್ಡ ಮತದಾನ ಆಗಿದೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು, ಶಾಸಕರ ನಡವಳಿಕೆ ಬಗ್ಗೆ ಬೇಸರ ಪಟ್ಟಿದ್ದಾರೆ. ಹೀಗಾಗಿ ಎಲ್ಲ 63 ಶಾಸಕರ ಮೇಲೂ ಅನುಮಾನ ಪಡುವಂತಾಗಿದೆ. ನಿನ್ನೆ ನಿತಿನ್ ನಬಿನ್ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ದೆಹಲಿಗೆ ನಾನು ಹಾಗೂ ಅಶೋಕ್ ಅವರು ಹೋಗುತ್ತಿದ್ದು, ಈ ವಾರದಲ್ಲೇ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಅಶೋಕ್ ಅವರ ಜತೆ ಚರ್ಚೆ ಮಾಡುತ್ತೇನೆ. ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ ಎಂದವರು ತಿಳಿಸಿದ್ದಾರೆ.

ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​​ನಿಂದ ಒಟ್ಟು 11 ಮತಗಳು ಕ್ರಾಸ್​​ ವೋಟಿಂಗ್​​ ಆಗಿತ್ತು. ಹೀಗಾಗಿ ಜೆಡಿಎಸ್​​ ಅಭ್ಯರ್ಥಿ ಸೋಲುಂಡಿದ್ದರೆ, ಬಿಜೆಪಿಯ ಎರಡು ಅಭ್ಯರ್ಥಿಗಳ ಪೈಕಿ ಓರ್ವ ಅಭ್ಯರ್ಥಿ ಪ್ರಯಾಸದಲ್ಲಿ ಗೆಲುವು ಪಡೆದಿದ್ದರು. ಓರ್ವ ಅಭ್ಯರ್ಥಿಗೆ 30 ಮತಗಳು ಎಂದು ಕೊನೇ ಕ್ಷಣದಲ್ಲಿ ರಾಜ್ಯ ಬಿಜೆಪಿಯ ನಾಯಕರು ನಿರ್ಧರಿಸಿದ್ದ ಪರಿಣಾಮ ಎಲೆಕ್ಷನ್​​ನಲ್ಲಿ ಭಾರೀ ಮುಖಭಂಗ ಬಿಜೆಪಿಗೆ ತಪ್ಪಿತ್ತು. ಹೀಗಾಗಿ ಪಕ್ಷಕ್ಕೆ ದ್ರೋಹ ಬಗೆದ ಶಾಸಕರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ವಿಪಕ್ಷ ನಾಯಕ ಆರ್​​. ಅಶೋಕ್​​ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments