ಈದು ಗ್ರಾಮದ ಕುರಿಯರು ಮನೆ ನಿವಾಸಿ ನಾಗೇಶ್ (40) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
4 ವರ್ಷಗಳಿಂದ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಅವರಿಗೆ ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಅವರು ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಜೂನ್ 20ರಂದು ಸಂಜೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಮೃತರ ತಮ್ಮ ಪ್ರಶಾಂತ್ ದೇವಾಡಿಗ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















