ತಾಲೂಕು ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ ಬಜಗೋಳಿ ಹಾಗೂ ಸಹಸಂಚಾಲಕರಾಗಿ ಶ್ರೀಧರ ಆಚಾರ್ಯ ಆಯ್ಕೆ
ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಕಳ ತಾಲೂಕು ಘಟಕದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ತಾಲೂಕು ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ ಬಜಗೋಳಿ ಹಾಗೂ ಸಹಸಂಚಾಲಕರಾಗಿ ಶ್ರೀಧರ ಆಚಾರ್ಯ ಅವರು ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ನೂತನ ಜವಾಬ್ದಾರಿಯನ್ನು ಸ್ವೀಕರಿಸಿದ ಇಬ್ಬರು ಪದಾಧಿಕಾರಿಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ನೇತೃತ್ವದಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಚಟುವಟಿಕೆಗಳು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ವಿಚಾರಧಾರೆ, ಕಾರ್ಯಕ್ರಮಗಳು ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಇವರ ಪಾತ್ರ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಬಲಿಷ್ಠಗೊಳ್ಳಲಿ ಹಾಗೂ ಹೆಚ್ಚಿನ ಜನಬೆಂಬಲ ಗಳಿಸಲಿ ಎಂದು ಗಣ್ಯರು ಶುಭಹಾರೈಸಿದರು.

















