Friday, June 26, 2026
Google search engine
Homeಕಾರ್ಕಳವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಕೇಂದ್ರ

ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಕೇಂದ್ರ

ಪಶ್ಚಿಮ ಏಷ್ಯಾ ಬಿಕ್ಕಟ್ಟು ಸುಧಾರಿಸುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲೆ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ಇದೀಗ ತೆರವುಗೊಳಿಸಿದೆ.

ಅಮೆರಿಕ ಹಾಗೂ ಇರಾನ್ ಶಾಂತಿ ಒಪ್ಪಂದದ ಬಳಿಕ ಮಧ್ಯಪ್ರಾಚ್ಯದಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಕಂಡುಬಂದಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ, ಸ್ಥಳೀಯ ಎಲ್‌ಪಿಜಿ ಉತ್ಪಾದನೆಯಲ್ಲಿ ಸುಧಾರಣೆ ಮತ್ತು ಆಮದು ಮಾಡಿಕೊಂಡ ಎಲ್‌ಪಿಜಿ ಸರಕುಗಳ ಅಂದಾಜು ಲಭ್ಯತೆಯನ್ನು ಗಮನಿಸಿ ಈ ನಿರ್ಧಾರ ಕೈಗೊಂಡಿದೆ.

ಇದರ ಜೊತೆಗೆ ಸಂಘರ್ಷದಿಂದಾಗಿ ಸ್ಥಗಿತಗೊಳಿಸಲಾಗಿದ್ದ ಬೃಹತ್ ಎಲ್‌ಪಿಜಿ ಪೂರೈಕೆಯನ್ನು ಇದೀಗ ಬಳಕೆಯ ಮಟ್ಟದ ಶೇ.50ರಷ್ಟು ಸಡಿಲಿಸಿದ್ದು, ಇದು ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ಗಮನಾರ್ಹ ಪರಿಹಾರವನ್ನು ಒದಗಿಸುತ್ತದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಮಯದಲ್ಲಿ ದೇಶದಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಕೊರತೆಯಾಗದಂತೆ ತಡೆಯಲು `ಅಗತ್ಯ ವಸ್ತುಗಳ ಕಾಯ್ದೆ’ಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಪೆಟ್ರೋಕೆಮಿಕಲ್ ವಲಯಕ್ಕೆ ಬಳಸುವ C3 ಮತ್ತು C4 ಕಚ್ಚಾ ವಸ್ತುಗಳು (ಪ್ಲಾಸ್ಟಿಕ್ ಹಾಗೂ ಗ್ಯಾಸ್ ತಯಾರಿಕೆಗೆ ಬಳಸುವ ಮೂಲ ಕಚ್ಚಾ ವಸ್ತುಗಳು) ಕೇವಲ ಎಲ್‌ಪಿಜಿ ಉತ್ಪಾದನೆಗೇ ಬಳಸುವಂತೆ ಆದೇಶಿಸಲಾಗಿತ್ತು. ಆದರೆ ಈಗ ದೇಶೀಯವಾಗಿ ಎಲ್‌ಪಿಜಿ ಉತ್ಪಾದನೆ ಸುಧಾರಿಸಿದೆ ಹಾಗೂ ವಿದೇಶದಿಂದ ಆಮದು ಮಾಡಿಕೊಳ್ಳುವ ಎಲ್‌ಪಿಜಿ ಸರಕುಗಳ ಲಭ್ಯತೆಯೂ ಉತ್ತಮವಾಗಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments