ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ. ವಿ. ಸುನಿಲ್ ಕುಮಾರ್ ಉದ್ಘಾಟಿಸಿ ಮಕ್ಕಳಿಗೆ ಎರಡು ಹನಿ ಜೀವ ರಕ್ಷಕ ಪೋಲಿಯೊ ಲಸಿಕೆಯನ್ನು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆಡಳಿತ ವೈದ್ಯಾಧಿಕಾರಿಗಳಾದ ಡಾ. ಶಶಿಕಲಾ ಇವರು ಪೋಲಿಯೊ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ, 2026-27 ರ ನಿಯೋಜಿತ ಅಧ್ಯಕ್ಷರಾದ ಶ್ರೀ ಕೆ ವಿಜೇಂದ್ರ ಕುಮಾರ್, ನಿಯೋಜಿತ ಸಹಾಯಕ ಗೌವರ್ನರ್ ಶ್ರೀ ಸುರೇಶ್ ನಾಯಕ್, ರೋಟರಿ ಸದಸ್ಯರಾದ ರೊ. ವಸಂತ್ ಎಂ, ರೊ. ಚೇತನ್ ಕುಮಾರ್, ತಾಲೂಕು ಆಸ್ಪತ್ರೆಯ ಫಿಸಿಷಿಯನ್ ಡಾ. ಚಂದ್ರಕಾಂತ್, ಮಕ್ಕಳ ತಜ್ಞರಾದ ಡಾ. ಸೌಜನ್ಯ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ದಿಶಾ ಕಿಶನ್, ಆಯುಷ್ ವೈದ್ಯಾಧಿಕಾರಿಗಳಾದ ಡಾ. ಸುಜಾತಾ ಶೆಟ್ಟಿ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದಶ್ರೀಮತಿ ಸುಶೀಲ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಶಶಿಕಲಾ, ಹಿರಿಯ ಶುಶ್ರುಷಕಾಧಿಕಾರಿ ಶ್ರೀಮತಿ ಮೇರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸ್ಮಿತಾ ಧಾರೆಕರ್, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಹರಿಣಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂದೀಪ್ ಕುಡ್ವ ಇವರು ವಂದಿಸಿದರು, ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶ್ರೀ ಶಿವಕುಮಾರ್ ಇವರು ಕಾರ್ಯಕ್ರಮ ನಿರೂಪಿಸಿದರು.


















