Monday, June 29, 2026
Google search engine
Homeಕಾರ್ಕಳಪೊಲೀಸ್ ಇಲಾಖೆಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಹಾಗೂ ಪರೀಕ್ಷಾ ವಿಧಾನದ ಬಗ್ಗೆ ಕಾರ್ಕಳದಲ್ಲಿ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಹಾಗೂ ಪರೀಕ್ಷಾ ವಿಧಾನದ ಬಗ್ಗೆ ಕಾರ್ಕಳದಲ್ಲಿ ಮಾಹಿತಿ ಕಾರ್ಯಾಗಾರ

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪೊಲೀಸ್ ಇಲಾಖೆಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಹಾಗೂ ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು ಜೂನ್ 29ರ ಸೋಮವಾರ ಸಂಜೆ 4 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಲಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ನೇರ ನೇಮಕಾತಿ ಮೂಲಕ 3395 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜುಲೈ 3 ಕೊನೆಯ ದಿನಾಂಕವಾಗಿದ್ದು, ಈ ಭಾಗದ ಹೆಚ್ಚಿನ ಯುವಕ ಯುವತಿಯರು ಪೊಲೀಸ್ ಇಲಾಖೆಯಲ್ಲಿ ಆಯ್ಕೆಗೊಳ್ಳಲಿ ಎಂಬ ಉದ್ದೇಶದಿಂದ
ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ, ಅನುಭವಿ ಅಧಿಕಾರಿಗಳಿಂದ ಮಾಹಿತಿ ನೀಡಲಾಗುವುದು.

ಯುವಕ, ಯುವತಿಯರು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಮತ್ತು ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್ ಹಾಗೂ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಕಾರ್ಕಳ ತಿಳಿಸಿದ್ದಾರೆ.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments