ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಇಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ , ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ , ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಈ ಹಣ ಮರುಪಾವತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿವೆ. ಶುಲ್ಕ ಪಾವತಿಸಿದ್ದ ವಿದ್ಯಾರ್ಥಿಗಳಿಗೆ 7 ದಿನಗಳೊಳಗೆ ಅವರ ಹಣವನ್ನು ಹಿಂದಿರುಗಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಯೋಜನೆಯು ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲಿದೆ.
















