Friday, July 3, 2026
Google search engine
Homeಕಾರ್ಕಳಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು- ಡಾ.ಶುಭಾ ಎಚ್‌.ಎಸ್‌.; ಪತ್ರಿಕಾ ದಿನಾಚರಣೆ: ಜೇಮ್ಸ್‌ ವಾಝ್‌ಗೆ ಪ್ರತಿಕಾ...

ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು- ಡಾ.ಶುಭಾ ಎಚ್‌.ಎಸ್‌.; ಪತ್ರಿಕಾ ದಿನಾಚರಣೆ: ಜೇಮ್ಸ್‌ ವಾಝ್‌ಗೆ ಪ್ರತಿಕಾ ದಿನದ ಗೌರವ

ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್‌ ಆಫ್ ಕಮ್ಯುನಿಕೇಶನ್‌ನ ನಿರ್ದೇಶಕಿ ಡಾ.ಶುಭಾ ಎಚ್‌.ಎಸ್‌. ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್‌ ಮೆಮೋರಿಯಲ್‌(ಮಿಷನ್‌) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸುದ್ದಿಗಳಲ್ಲಿ ಮಹಿಳೆಯರನ್ನು ಹೆಚ್ಚಾಗಿ ಸಂತ್ರಸ್ತರಾಗಿ, ರಾಜಕಾರಣಿಗಳಾಗಿ ಅಥವಾ ಕ್ರೀಡಾಪಟುಗಳಾಗಿ ಮಾತ್ರ ಬಿಂಬಿಸಲಾಗುತ್ತದೆ. ಆದರೆ ನೀತಿ ನಿರೂಪಕಿ, ವಿಷಯ ತಜ್ಞೆ ಮಹಿಳೆಯರನ್ನು ಸಂದರ್ಶಿಸುವ ಅಥವಾ ಅವರ ಅಭಿಪ್ರಾಯ ಪಡೆಯುವ ಪ್ರಮಾಣ ಅತ್ಯಂತ ವಿರಳವಾಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಮಂಜುನಾಥ್‌ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್‌ ವಾಝ್‌ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ ಮಾಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಡಾ.ಬಿ.ಆರ್‌.ಅಂಬೇಡ್ಕರ್‌ ತಂತ್ರಜ್ಞಾನ ಸಂಸ್ಥೆಯ ಆಡಳಿತಾ˜ ಕಾರಿ ಎಸ್‌.ಎಚ್‌.ಸಂತೋಷ್‌ ಕುಮಾರ್‌ ಪತ್ರಕರ್ತರ ಒತ್ತಡ ನಿರ್ವಹಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು.

ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಸರಕಾರದ ಗ್ರಾಮೀಣ ಪತ್ರಕರ್ತರ ಬಸ್‌ಪಾಸ್‌ ಯೋಜನೆಯ ಫಲಾನುಭವಿ ಯೋಗೀಶ್‌ ಕುಂಭಾಶಿಗೆ ಕಾರ್ಡ್‌ ವಿತರಿಸಲಾಯಿತು.

ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್‌, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್‌ ಕುಮಾರ್‌ ಶಿರೂರು, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಅಂಕಿತ್‌ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್‌ ಕುಂದರ್‌ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್‌ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್‌ ಮಾರ್ಪಳ್ಳಿ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು. ಜಿಲ್ಲಾ ಸಮಿತಿ ಸದಸ್ಯ ಅಜಿತ್‌ ಆರಾಡಿ ಪ್ರತಿಭಾ ಪುರಸ್ಕಾರದ ಪಟ್ಟಿ ವಾಟಿಸಿದರು.

ಸನ್ಮಾನ ಪತ್ರವನ್ನು ಉಡುಪಿ ಪ್ರತಿಕಾ ಭವನ ಸಮಿತಿಯ ಸದಸ್ಯ ಮೈಕಲ್‌ ರೋಡ್ರಿಗಸ್‌ ವಾಚಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಉದಯ ಕುಮಾರ್‌ ಮುಂಡ್ಕೂರು ವಂದಿಸಿದರು. ಪತ್ರಕರ್ತೆ ಅಕ್ಷತಾ ಗಿರೀಶ್‌ ಐತಾಳ್‌ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments