ವಿದ್ಯಾರ್ಥಿಗಳ ಹಕ್ಕಿಗಾಗಿ, ಅವರ ಭವಿಷ್ಯಕ್ಕಾಗಿ ನಾವೆಲ್ಲರೂ ಒಂದಾಗಿ ಧ್ವನಿ ಎತ್ತೋಣ
ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಈ ದುರ್ಘಟನೆಯಿಂದ ಅಸುನೀಗಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಲೈಟ್ ಮಾರ್ಚ್ ಅನ್ನು ಜು.06 (ಸೋಮವಾರ)ರಂದು ಸಂಜೆ 5:00 ಗಂಟೆಗೆ ರಾಜಾಂಗಣ ಪಾರ್ಕಿಂಗ್, ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯನ್ನು ಉದ್ದೇಶಿಸಿ ಎಂ. ಜಿ ಹೆಗ್ಡೆ ಯವರು ಮಾತನಾಡಲಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ, ನ್ಯಾಯ ಮತ್ತು ಪಾರದರ್ಶಕ ಶಿಕ್ಷಣ ವ್ಯವಸ್ಥೆಗಾಗಿ ನಡೆಯಲಿರುವ ಈ ಮಹತ್ವದ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸಮಸ್ತ ಕಾಂಗ್ರೆಸ್ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮನವಿ ಮಾಡಿದ್ದಾರೆ.



















