ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ವಂಚನೆ.
ಒಕ್ಕೂಟದ ಮುಖ್ಯ ಬರಹಗಾರ್ತಿ ಮತ್ತು ಆಕೆಯ ಪತಿಯ ಬಂಧನ.
ಹಿರಿಯಡ್ಕ : ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ೩ ಒಕ್ಕೂಟದಲ್ಲಿ 123 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ದಂಪತಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷ್ ಎಂದು ಗುರುತಿಸಲಾಗಿದೆ.
ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವ ಆರೋಪ ಇವರ ಮೇಲಿದೆ. ಲೆಕ್ಕಪರಿಶೋಧನೆ ವೇಳೆ ವಂಚನೆ ಬೆಳಕಿಗೆ ಬಾರದಂತೆ ಬೇರೆ ಬೇರೆ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.
ಈ ಮೂಲಕ ಒಟ್ಟು 23 ಲಕ್ಷವನ್ನು ದುರುಪಯೋಗಪಡಿಸಿಕೊಂಡು,
ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಸುಗಂಧಿ ಹಾಗೂ ಅವರ ಪತಿ ಸಂತೋಷ ಸೇರಿಕೊಂಡು ವಿವಿಧ ಸದಸ್ಯರ ಹೆಸರಿನಲ್ಲಿ ನಕಲಿ ಸಹಿ ಮತ್ತು ದಾಖಲೆಗಳನ್ನು ಸೃಷ್ಟಿಸಿರುವುದು ಕಂಡುಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ನಿರ್ದೇಶನ ಹಾಗೂ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಪುನೀತ್ ಕುಮಾರ್ ಬಿ.ಇ. ಮತ್ತು ತನಿಖಾ ಪಿಎಸ್‌ಐ ವಿಠಲ ಮಲವಡಕರ ನೇತೃತ್ವದ ತಂಡ ಜುಲೈ 6ರಂದು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದೆ.



















