Saturday, July 11, 2026
Google search engine
Homeಕಾರ್ಕಳಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ:...

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ: ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮಾವಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿರಂತರ ಒಂದಲ್ಲಾ ಒಂದು ಬಹುಪಯೋಗಿ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುತ್ತಾ ಬರುತ್ತಿದೆ. ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಶಿಕ್ಷಣ ನೀಡುವ ಈ ಸಂಸ್ಥೆ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ ಬೆಳೆದು ನಿಂತಿದೆ.

ಈಗ ಮತ್ತೊಂದು ವಿದ್ಯಾರ್ಥಿ ಸ್ನೇಹಿ ಯೋಜನೆಗೆ ಚಾಲನೆ ನೀಡಿದ್ದು ವಿದ್ಯಾರ್ಥಿಗಳಿಗೆ ಉಚಿತ ಲಾಂಗ್ ಟರ್ಮ್ ನೀಟ್ ತರಬೇತಿಯನ್ನು ಆರಂಭಿಸುತ್ತಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ ತರಬೇತಿಯಿಂದ ವಂಚಿತರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ (ಪಿಸಿಎಂಬಿ) ಮುಗಿಸಿ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಅಪೂರ್ವ ಅವಕಾಶ ಸಿಗಲಿದೆ.

ಸೀಮಿತ ವಿದ್ಯಾರ್ಥಿಗಳ ವಿಶೇಷ ನೀಟ್ ಬ್ಯಾಚ್ ಇದಾಗಿದ್ದು ಸೇರಬಯಸುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೆಲ್ ಹಾಗೂ ಊಟದ ಸೌಲಭ್ಯ ಲಭ್ಯವಿದ್ದು ಜೊತೆಗೆ ಕೋಚಿಂಗ್ ಹಾಗೂ ಅಧ್ಯಯನ ಸಾಮಾಗ್ರಿಗಳು ಸಂಪೂರ್ಣವಾಗಿ ಉಚಿತವಾಗಿರಲಿದೆ.

ಆಸಕ್ತರು ಈ ಕೂಡಲೇ ದೂರವಾಣಿ ಸಂಖ್ಯೆ 8762398801/ 9964022831 ಅಥವಾ ಸಂಸ್ಥೆಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments