ಸಮಾಜ ಸೇವೆಯೇ ಶ್ರೇಷ್ಠ ಸೇವೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಮಾನವೀಯತೆ ಮತ್ತು ರಾಷ್ಟçಪ್ರೇಮವನ್ನು ಬೆಳೆಸುವ ಅತ್ಯುತ್ತಮ ವೇದಿಕೆ ರಾಷ್ಟ್ರೀಯ ಸೇವಾಯೋಜನೆಯಾಗಿದೆ ಎಂದು ಉದ್ಯಮಿ ಶ್ರೀ ವಿಜಯ್ ಶೆಟ್ಟಿ ಹೇಳಿದರು. ಅವರು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2026-27ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮನೋತಜ್ಞರಾದ ಡಾ. ಪ್ರಸನ್ನ ಹೆಗ್ಡೆ ಮಾತನಾಡಿ, ನನಗಾಗಿ ಅಲ್ಲ ನಿನಗಾಗಿ ಎಂಬ ಎನ್.ಎಸ್.ಎಸ್‌ನ ಧ್ಯೇಯವಾಕ್ಯವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸೇವೆಗೆ ಅರ್ಥ ಬರುತ್ತದೆ. ಸೇವೆ ಎಂಬುದು ಪ್ರಶಸ್ತಿಗಾಗಿ ಮಾಡುವ ಕೆಲಸವಲ್ಲ. ಸಮಾಜಕ್ಕೆ ನೀಡುವ ನಿಸ್ವಾರ್ಥ ಸೇವೆಯು ರಾಷ್ಟ್ರದ ಭವಿಷ್ಯವನ್ನು ಇನ್ನಷ್ಟು ಉಜ್ವಲಗೊಳಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸುವ ರಾಷ್ಟ್ರೀಯ ಸೇವಾ ಯೋಜನೆಯು ಸಮಾಜದ ಆಶಾಕಿರಣವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣದ ಮುಖ್ಯ ನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಹಿಸಿದ್ದರು.
ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಮಿತ್ರ, ಲೆ.ಮಂಜುನಾಥ್ ಮುದೂರು, ಎನ್.ಎಸ್.ಎಸ್ ಸಂಯೋಜನಾಧಿಕಾರಿ ಶ್ರೀ ಪ್ರಸಾದ್ ಆಚಾರ್ಯ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಂಗೀತಾ ಕುಲಾಲ್ ಉಪಸ್ಥಿತರಿದ್ದರು.
ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಮುಖ್ಯ ಸಂಯೋಜನಾಧಿಕಾರಿ ಶ್ರೀ ಶೈಲೇಶ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ನಾಯಕರಾದ ಧನುಶ್ ಚೌಟ ಪ್ರಮಾಣ ವಚನ ಬೋಧಿಸಿ ಹಾಗೂ ಕು.ಅನ್ವಿತಾ ವಂದಿಸಿದರು.




















