Monday, July 13, 2026
Google search engine
Homeಕಾರ್ಕಳಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.

ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್‌ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ, ಡೆತ್‌ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments