ಬೆಂಗಳೂರಿನಲ್ಲಿ ಭಾರತದ ಮೊದಲ ಸರಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.
“ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗವನ್ನು ಬೆಳೆಸಲು ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು” ಎಂದು ಹೇಳಿದರು.



















