Thursday, July 16, 2026
Google search engine
Homeಕಾರ್ಕಳಏನಾದ್ರೂ ಮಾಡಿ ವಾಂಗ್ಚುಕ್ ಪ್ರಾಣ ಉಳಿಸಿ...ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ

ಏನಾದ್ರೂ ಮಾಡಿ ವಾಂಗ್ಚುಕ್ ಪ್ರಾಣ ಉಳಿಸಿ…ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ, ಕಳೆದ 19 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಆರೋಗ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸೋನಮ್ ವಾಂಗ್ಚುಕ್ ಅವರ ಜೀವ ಉಳಿಸಲು ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಹಾಗೂ ತುರ್ತು ಚಿಕಿತ್ಸೆಯನ್ನು ಸರ್ಕಾರ ತಕ್ಷಣವೇ ಕೈಗೊಳ್ಳಬೇಕು, ಪ್ರತಿಯೊಬ್ಬ ಪ್ರಜೆಯ ಜೀವವೂ ಅತ್ಯಂತ ಅಮೂಲ್ಯವಾದದ್ದು, ಅದನ್ನು ಉಳಿಸಲು ಸರ್ಕಾರಿ ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಬೇಕು ಎಂದು ಹೈಕೋರ್ಟ್ ಗುರುವಾರ ಜುಲೈ- 16 ಬೆಳಿಗ್ಗೆ ಆದೇಶಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments