ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿ 2026 – 27ನೇ ಶೈಕ್ಷಣಿಕ ವರ್ಷದ ಪೋಷಕರ ಮಹಾಸಭೆಯು ನಡೆಯಿತು.ಇದೇ ಸಭೆಯಲ್ಲಿ ಕಳೆದ ಮಾರ್ಚಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಿರಿಯ ಉಪನ್ಯಾಸಕರಾದ ಶ್ರೀ ಗೋಪಾಲಕೃಷ್ಣ ಗೋರೆ, ಇವರು ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕ ಭಾಷಣವನ್ನು ಮಾಡಿದರು.ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರತ್ನಾಕರ ಪೂಜಾರಿ ಇವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರಾದ ಶ್ರೀ ನಾರ್ಬರ್ಟ್ ಮಾರ್ಟಿಸ್ ಇವರು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸಂತೋಷ ವಾಗ್ಲೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಸ್ಟೀವನ್ ಡಿಸೋಜ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುತ್ತುಮನೆ ಪ್ರಶಾಂತ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪ್ರಾಂಶುಪಾಲರಾದ ಶ್ರೀ ಸೀತಾರಾಮ ಭಟ್ ಇವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಸುಜಾತ ನಾಯಕ್ ನಿರೂಪಿಸಿದರು. ಗಣಿತಶಾಸ್ತ್ರ ಉಪನ್ಯಾಸಕರಾದ ಶ್ರೀ ಗಾಡ್ ಫ್ರೆಡ್ ಕರ್ಕಡ ಇವರು ಧನ್ಯವಾದ ಸಮರ್ಪಣೆ ಮಾಡಿದರು.


















