Tuesday, July 21, 2026
Google search engine
Homeಕಾರ್ಕಳಮಣಿಪಾಲ ಜ್ಞಾನಸುಧಾದಲ್ಲಿ ಉಡುಪಿ ಜಿಲ್ಲೆಯ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾದಲ್ಲಿ ಉಡುಪಿ ಜಿಲ್ಲೆಯ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಿಗೆ ಸನ್ಮಾನ

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ ಸ್ಪೂರ್ತಿಯಾಗಿರುತ್ತದೆ. ದೈಹಿಕ ಶಿಕ್ಷಣ ಉಪನ್ಯಾಸಕರು ನಿಟ್ಟಿನಲ್ಲಿ ಕಾರ್ಯಪೃವೃತ್ತರಾಗಬೇಕು ಹಾಗೂ ಕ್ರೀಡಾ ಸಾಧಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಿಸುವಂತಾಗಬೇಕು ಎಂದು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಷನ್‌ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಶುಭ ಹಾರೈಸಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ನಡೆದ ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ರಮೇಶ್‌ ಕಾಂಚನ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.ಕಾರ್ಯಕ್ರಮದ

ಅಧ್ಯಕ್ಷತೆಯನ್ನು ವಹಿಸಿದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ವಿಭಾಗದ ಉಪನಿರ್ದೇಶಕರಾದ  ಶ್ರೀ ರವೀಂದ್ರ ಉಪಾಧ್ಯ ಇವರು ಮುಂದೆ ಬರುವ ಕ್ರೀಡಾಕೂಟಗಳಿಗೆ ಇಲಾಖೆಯ ಸಂಪೂರ್ಣ ಬೆಂಬಲವಿರುವುದು ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರಿಗೆ ಮತ್ತು ತರಬೇತುದಾರರಿಗೆ ಸನ್ಮಾನಿಸಲಾಯಿತು.ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ವಿಭಾಗದ ನಿವೃತ್ತ ಉಪನಿರ್ದೇಶಕರಾದ ಶ್ರೀ ಮಾರುತಿ ಹಾಗೂ ಮಂಗಳೂರು ಉತ್ತರದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಜೀವನ್‌ ಕುಮಾರ್‌ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಸಂದರ್ಭದಲ್ಲಿ ಉಡುಪಿ ಜಿಲ್ಲಾ .ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಮಂಜುನಾಥ ಭಟ್‌,ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ . ಪೂ.ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಯಾನಂದ ಪೈ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.. ದಿನೇಶ್‌ ಎಮ್‌ ಕೊಡವೂರು, ಮಣಿಪಾಲ ಜ್ಞಾನಸುಧಾ .ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ, ಉಡುಪಿ ಜಿಲ್ಲಾ .ಪೂ. ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ್‌ ಹೆಗ್ಡೆ ಶಾನಾಡಿ, ಕ್ರೀಡಾ ಸಂಯೋಜಕರಾದ ದಿನೇಶ್‌ ಕುಮಾರ್‌ , ಕಾರ್ಯದರ್ಶಿ ಸುಕೇಶ್‌ ಶೆಟ್ಟಿ ಉಪಸ್ಥಿತರಿದ್ದರು.

ಮಣಿಪಾಲ ಜ್ಞಾನಸುಧಾ .ಪೂ. ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶಮಿತ ಹಾಗೂ ಅಮೃತ ಭಾರತಿ ಕಾಲೇಜಿನ ವಿಜಯ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments