ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚು ವಿಷಯಗಳನ್ನು ತಿಳಿದುಕೊಳ್ಳುಬೇಕು:ರೇಂಜ್ ಫಾರೆಸ್ಟ್ ಆಫೀಸರ್ ಅರುಣ್ ರಾವ್.
“ಆಧುನೀಕರಣದ ಇಂದಿನ ಯುಗದಲ್ಲಿ ಮಾನವನು ಪ್ರಕೃತಿಯಿಂದ ದೂರ ಸರಿಯುತ್ತಿದ್ದಾನೆ. ಇದರಿಂದಾಗಿ ಪ್ರಕೃತಿ ಮತ್ತು ಮಾನವರ ನಡುವೆ ಸಮತೋಲನ ತಪ್ಪಿ ಹೋಗುತ್ತದೆ. ಮರಗಳನ್ನು ಕಡಿಯುವುದರಿಂದ ಪರಿಸರದ ಉಷ್ಣತೆ ಹೆಚ್ಚಾಗಿ ಜೀವಿಗಳ ನಾಶ ಉಂಟಾಗುತ್ತದೆ. ಆದ್ದರಿಂದ ಪರಿಸರವನ್ನು ಉಳಿಸಬೇಕು “ಎ೦ದು ತಮ್ಮ ಭಾಷಣದಲ್ಲಿ ಹೇಳಿದರು.
ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶ್ರಿಮತಿ ಪಾಟ್ಕರ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಕೆ.ಬಾಲಕೃಷ್ಣ ರಾವ್ ರವರು” ಹಸಿರು ಮನೆ ಪರಿಣಾಮ”ದ
ಬಗ್ಗೆ ಮಾತನಾಡಿದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲೊಲಿಟ ಡಿ’ಸಿಲ್ವಾ ವೇದಿ ಕೆಯಲ್ಲಿ ಉಪಸ್ಥಿತರಿದ್ದರು. ಫಾರೆಸ್ಟ್
ಡಿಪಾರ್ಟ್ಮೆಂಟಿನ ಸಿಬ್ಬಂಧಿಗಳು ಉಪಸ್ಥಿತರಿದ್ದರು.



















