ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಸಿಜೆಪಿ ಮುಂದಿಟ್ಟಿದ್ದು, ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಸಂಬಂಧ ಇಂದು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ನೇತೃತ್ವದಲ್ಲಿ ಸಿಜೆಪಿ ಜೊತೆ ಮೂರನೇ ಸುತ್ತಿನ ಸಭೆ ನಡೆಸಿದೆ.


















