ಲಯನ್ಸ್ ಕ್ಲಬ್ ಬೆಳ್ಮಣ್‌ನ ಸಹಯೋಗದಲ್ಲಿ ಸರ್ವ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಬೆಳ್ಮಣ್ ಬಸ್ ನಿಲ್ದಾಣದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಜಿ ಲಯನ್ ಎನ್. ಎಂ. ಹೆಗಡೆ ಅವರು ಕಾರ್ಗಿಲ್ ವಿಜಯೋತ್ಸವದ ಮಹತ್ವ, ಭಾರತೀಯ ಯೋಧರ ಶೌರ್ಯ, ತ್ಯಾಗ ಹಾಗೂ ದೇಶಭಕ್ತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶದ ಭದ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಯೋಧರನ್ನು ಸ್ಮರಿಸಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಬಿ. ಹೆಚ್. ಶಿವರಾಮ ಆಚಾರ್ಯ ಹಾಗೂ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ದೇಶಭಕ್ತಿಯ ಸಂದೇಶವನ್ನು ಸಾರಿದರು.



















